

ಬೆಂಗಳೂರು: ಸಂರಕ್ಷಿತ ಸ್ಮಾರಕ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿರುವ ಪ್ರಾಚೀನ ಚೌಟರ ಅರಮನೆ ಸಮೀಪ ಹಳೇ ಮಾರುಕಟ್ಟೆ ಕಡ್ಡಡ ನೆಲಸಮಗೊಳಿಸಿ ಬಹುಮಹಡಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಈ ತಿಂಗಳ 24ರಂದು ನ್ಯಾಯಾಲಯ ಕೆಲ ಆದೇಶಗಳನ್ನು ಹೊರಡಿಸಲಿದೆ ಎಂದು ಹೈಕೋರ್ಟ್ ಹೇಳಿದೆ.
ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುತ್ತಿರುವ ಮೂಡಬಿದಿರೆ ಪುರಸಭೆಯ ಕ್ರಮ ಪ್ರಶ್ನಿಸಿ ಜೇಸನ್ ಮಾರ್ಷಲ್ ನವಾರೇಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರ ಕ್ರಮ ಪ್ರಶ್ನಿಸಿ ಮೂಡಬಿದಿರೆ ಪುರಸಭೆ ಅರ್ಜಿಯನ್ನು ಸಲ್ಲಿಸಿತು
ಈ ಎರಡು ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ನ್ಯಾಯಪೀಠದ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಕಾನೂನಿನಲ್ಲಿ ಇದ್ದರೂ, ಪುರಾತನ ಚೌಟರ ಅರಮನೆಯ 190 ಮೀಟರ್ ವ್ಯಾಪ್ತಿಯಲ್ಲಿರುವ ಹಳೆಯ ಮಾರುಕಟ್ಟೆ ಕಟ್ಟಡವನ್ನು ನೆಲಸಮ ಮಾಡಿ ಸ್ಥಳೀಯ ಪುರಸಭೆ ಬಹುಮಹಡಿ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುತ್ತಿದೆ. ಕಾಮಗಾರಿಗೆ ಟೆಂಡರ್ ಕರೆಯುವಾಗಲೂ ನಿಯಮಗಳನ್ನು ಉಲ್ಲಂಘಿಸಲಾಗಿಲಿದೆ. ನೂರಾರು ಕೋಟಿ ಬೆಲೆ ಬಾಳುವ ಸಾರ್ವಜನಿಕ ಆಸ್ತಿಯನ್ನು ಪುರಸಭೆ ತನ್ನಿಚ್ಛೆಯಂತೆ ಬಳಸಿಕೊಳ್ಳುತ್ತಿದೆ ಎಂದು ವಾದ ಮಂಡಿಸಿದರು
ಮೂಡಬಿದಿರೆ ಪುರಸಭೆ ಪರ ವಕೀಲರು ವಾದ ಮಂಡಿಸಿ, ಸಂರಕ್ಷಿಕತ ಸ್ಮಾರಕ ಪ್ರದೇಶದ 100 ಮೀಟರ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧವಿದೆ. ಆದರೆ, ಮಾರುಕಟ್ಟೆ ಸ್ಥಳವು ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಗೆ ಬರುವುದಿಲ್ಲ. ಮೇಲಾಗಿ, ಕಟ್ಟಡ ನಿರ್ಮಾಣದಿಂದ ಸಂರಕ್ಷಿತ ಸ್ಮಾರಕಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಕೇಂದ್ರ ಸರ್ಕಾರ ಸ್ವಾಮ್ಯದ ‘ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್’ ವರದಿ ನೀಡಿದೆ. ಈ ವರದಿ ಪರಿಶೀಲಿಸಿ ಎಂದು ನ್ಯಾಯಾಲಯದ ಆದೇಶವವಿದ್ದರೂ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಅದನ್ನು ಪರ‌್ಗಿಣಿಸಿಲ್ಲ ಎಂದರು.
ಅರ್ಜಿದಾರರು, ಮೂಡಬಿದಿರೆ ಪುರಸಭೆ, ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಹಾಗೂ ಕಟ್ಟಡ ಕಾಮಗಾರಿ ಗುತ್ತಿಗೆದಾರರ ಪರ ವಕೀಲ ವಾದಏಛ್ಞಿಪ್ರತಿವಾದ ಆಲಿಸಿದ ನ್ಯಾಯಪೀಠ, ಈ ವಿವಾದದ ಬಗ್ಗೆ ನ್ಯಾಯಾಲಯವು ಜು 24ರಂದು ಕೆಲ ಆದೇಶಗಳನ್ನು ಹೊರಡಿಸಲಿದೆ. ಈ ವೇಳೆ ಗುತ್ತಿಗೆದಾರರ ನಡೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಲಿದೆ. ಅಲ್ಲದೇ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ತನ್ನ ಅಭಿಪ್ರಾಯವನ್ನೂ ತಿಳಿಸಬೇಕಿದೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ನಿವೇನು ನ್ಯಾಯಾಲಯಕ್ಕೂ ಮೀರಿದವರಾ?
ಭಾರತೀಯ ಸ್ಮಾರಕಗಳ ಪ್ರಾಧಿಕಾರ ಅನುಮತಿ ಇಲ್ಲದೆ ಕಟ್ಟಡ ನಿರ್ಮಾಣ ಪ್ರಾರಂಭಿಸಲಾಗಿದೆ. ಒಂದೊಮ್ಮೆ ಅನುಮತಿ ಇಲ್ಲದೆ ಕಟ್ಟಡ ನಿರ್ಮಾಣ ಆರಂಭಿಸಿದರೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಏನೂ ಮಾಡುವಂತಿಲ್ಲ ಎಂದು ಸರ್ವೇಕ್ಷಣಾಲಯ ಪರ ವಕೀಲರು ವಿವರಿಸಿದರು.
ಅನುಮತಿ ಇಲ್ಲದೆ ಗುತ್ತಿಗೆದಾರರು ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೂ ಹೇಗೆ? ‘ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್’ ವರದಿ ಪರಿಶೀಲಿಸಿ ಎಂದು ನ್ಯಾಯಾಲಯ ಆದೇಶ ನೀಡಿದ್ದರೂ ಸುಮ್ಮನೆ ಇದ್ದಿದ್ದೇಕೆ‘ ನಿವೇನು ನ್ಯಾಯಾಲಯಕ್ಕೂ ಮೀರಿದವರಾ? ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ವಕೀಲರನ್ನು ನ್ಯಾಯಾಲಯ ಗುತ್ತಿಗೆದಾರರು ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.