ಅಪ್ರಾಪ್ತ ವಯಸ್ಕ ವಿದ್ಯಾರ್ಥಿಯೊಂದಿಗೆ ಸರಸ​​; ಬೆತ್ತಲೆಯಾಗಿ ಸಿಕ್ಕಿಬಿದ್ದ ಇಂಗ್ಲಿಷ್ ಶಿಕ್ಷಕಿ ಅರೆಸ್ಟ್

Jessica Sawicki
Published on

ನ್ಯೂಜೆರ್ಸಿ: ವಿವಾಹಿತ ಶಿಕ್ಷಕಿಯೊಬ್ಬರು ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ಎಸಗುವ ಸಮಯದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿರುವ ಘಟನೆ ಅಮೆರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದೆ.

ಬಂಧಿತಳನ್ನು ಜೆಸ್ಸಿಕಾ ಸಾವಿಕಿ (37) ಎಂದು ಗುರುತಿಸಲಾಗಿದ್ದು, ಈಕೆ ಬಾಲಕ ಓದುತ್ತಿರುವ ಹ್ಯಾಮಿಲ್ಟನ್ ಹೈಸ್ಕೂಲ್ ವೆಸ್ಟ್ ಶಾಲೆಯಲ್ಲಿ ಇಂಗ್ಲಿಷ್ ಶಿಕಕ್ಷಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಸ್ಸನ್‍ಪಿಂಕ್ ವನ್ಯಜೀವಿ ನಿರ್ವಹಣಾ ಪ್ರದೇಶದಲ್ಲಿ ಪರಿವೀಕ್ಷಕರು ಕಾರಿನಲ್ಲಿ ಶಿಕ್ಷಕಿ ಹಾಗೂ ವಿದ್ಯಾರ್ಥಿ ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಶಿಕ್ಷಕಿ ಹಾಗೂ ವಿದ್ಯಾರ್ಥಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಚಾರಣೆ ವೇಳೆ ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ಐದಕ್ಕೂ ಹೆಚ್ಚು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದು, ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕನನ್ನು ಕೌನ್ಸಿಲಿಂಗ್​ಗೆ ಕಳುಹಿಸಲಾಗಿದೆ. ವಿಚಾರಣೆ ಮುಗಿದ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net