ಪಟಾಕಿ ಘಟಕದಲ್ಲಿ ಭಾರೀ ಸ್ಫೋಟ; ಆರು ಮಂದಿ ಬಲಿ: ಹಲವರಿಗೆ ಗಾಯ! | Explosion

dk - 2025-07-01T142014.470
Published on

Explosion: ತಮಿಳುನಾಡಿನ ವಿರುಧುನಗರದ ಸತ್ತೂರು ಬಳಿಯ ಚಿನ್ನಕಾಮನ್‌ಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇತರ ಐದು ಜನರು ಗಾಯಗೊಂಡಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ. ಗಾಯಗೊಂಡ ಐವರಲ್ಲಿ ಮೂವರು ಸಂಪೂರ್ಣವಾಗಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದ್ದಾರೆ.

ಲಕ್ಷ್ಮಿ, ಪುನ್ನಿಯಮೂರ್ತಿ, ರಾಮಮೂರ್ತಿ, ಚೆಲ್ಲಪಾಂಡಿ ಮತ್ತು ವೈರಮಣಿ ಮೃತರು ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದಾಗ ಕಾರ್ಮಿಕರು ಪಟಾಕಿಗಳನ್ನು ತಯಾರಿಸುವಲ್ಲಿ ನಿರತರಾಗಿದ್ದರು ಮೂಲಗಳು ತಿಳಿಸಿವೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಾಳುಗಳಿಗೆ ಶಿವಕಾಶಿ ಮತ್ತು ಮಧುರೈನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಸತ್ತೂರು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net