

explosion; ಪಂಜಾಬ್‌ನ ಮೊಹಾಲಿ ಜಿಲ್ಲೆಯ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಇಂದು(ಆ.08) ಭಾರಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕೈಗಾರಿಕಾ ಪ್ರದೇಶದ 9ನೇ ಹಂತದಲ್ಲಿರುವ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಯ ಬಳಿಕ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಸೇರಿದಂತೆ ಪೊಲೀಸ್ ಮತ್ತು ನಾಗರಿಕ ಆಡಳಿತದ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿಯಲು ಮತ್ತು ರಕ್ಷಣಾ ಪ್ರಯತ್ನಗಳ ಮೇಲ್ವಿಚಾರಣೆ ಮಾಡಲು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ವೈದ್ಯಕೀಯ ತಂಡಗಳು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಬಂದು ರಕ್ಷಣಾ ತನಿಖೆ ಮುಂದುವರೆಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಮೊಹಾಲಿಯ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ, ಘಟನೆಯ ಸ್ಥಳದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.
(ಏಜೆನ್ಸೀಸ್)