ಸಿಗರೇಟ್​ ವಿಚಾರಕ್ಕೆ ವಿದ್ಯಾರ್ಥಿ ಹಾಗೂ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ: 33 ಜನರ ಬಂಧನ

clash
Published on

ನೋಯ್ಡಾ: ಸಿಗರೇಟ್​ ವಿಚಾರವಾಗಿ ವಿಶ್ವವಿದ್ಯಾಲಯದಲ್ಲಿ ಖಾಸಗಿ ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಘಟನೆಯು ಗೌತಮ್ ಬುದ್ಧ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಒಟ್ಟು 33 ಜನರನ್ನು ಬಂಧಿಸಿದ್ದಾರೆ. ಮುನ್ಶಿ ಪ್ರೇಮಚಂದ್ ಹಾಸ್ಟೆಲ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಸಿಗರೇಟ್ ಸೇದುವುದನ್ನು ನೋಡಿದ ಭದ್ರತಾ ಸಿಬ್ಬಂದಿಗಳು ಈ ಕುರಿತು ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಕೊನೆಗೆ ಘರ್ಷಣೆ ಉಂಟಾಗಿದೆ.

ಕೆಲವು ಕೋಲು ಹಿಡಿದ ವ್ಯಕ್ತಿಗಳು ಹಾಸ್ಟೆಲ್‌ನ ಹೊರಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಮತ್ತು ಕಾರುಗಳ ಜಖಂಗೊಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ವಕ್ತಾರರು, ಭಾನುವಾರ ರಾತ್ರಿ 10.30ರ ಸುಮಾರಿಗೆ ಎರಡು ಕಡೆಯವರ ನಡುವೆ ವಾಗ್ವಾದ ನಡೆದು ಘರ್ಷಣೆಗೆ ಉಂಟಾಗಿದೆ. ಈಗಾಗಲೇ ಈ ಬಗ್ಗೆ 33 ಜನರನ್ನು ಬಂಧಿಸಿದ್ದು, ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net