ಸರ್ಕಾರಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ: ಬೆಂಕಿ ಕೆನ್ನಾಲಿಗೆಗೆ 6 ರೋಗಿಗಳು ಬಲಿ! | Massive fire

Untitled design - 2025-10-06T071052.385
Published on

Massive fire: ರಾಜಸ್ಥಾದ ಜೈಪುರದಲ್ಲಿನ ಸರ್ಕಾರಿ ಅಧೀನದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ತುರ್ತು ಕೇಂದ್ರದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 6 ಜನ ರೋಗಿಗಳು ಮೃತಪಟ್ಟಿದ್ದಾರೆ.

ಮೃತರನ್ನು ಪಿಂಟು (ಸಿಕಾರ್‌ನಿಂದ), ದಿಲೀಪ್ (ಜೈಪುರದ ಆಂಧಿಯಿಂದ), ಶ್ರೀನಾಥ್, ರುಕ್ಮಿಣಿ, ಖುರ್ಮಾ (ಎಲ್ಲರೂ ಭರತ್‌ಪುರದಿಂದ) ಮತ್ತು ಬಹದ್ದೂರ್ (ಸಂಗನೇರ್, ಜೈಪುರದಿಂದ) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಾಗ ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಟ್ರಾಮಾ ಸೆಂಟರ್ ಇನ್‌ಚಾರ್ಜ್ ಡಾ.ಅನುರಾಗ್ ಧಾಕಡ್ ಹೇಳಿದ್ದಾರೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ ಎಂದು ಹೇಳಿದರು.

ಅವರಲ್ಲಿ ಆರು ಮಂದಿ, ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಘಟನೆಯಲ್ಲಿ ಬಲಿಯಾಗಿದ್ದಾರೆ. ಇತರ ಹದಿನಾಲ್ಕು ರೋಗಿಗಳನ್ನು ಬೇರೆ ಐಸಿಯುನಲ್ಲಿ ದಾಖಲಿಸಲಾಯಿತು, ಮತ್ತು ಎಲ್ಲರನ್ನೂ ಯಶಸ್ವಿಯಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು ಎಂದು ಡಾ.ಅನುರಾಗ್ ಧಾಕಡ್ ಹೇಳಿದ್ದಾರೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೆಧಾಮ್ ಅವರು ಆಘಾತ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net