ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ: ಅನೇಕರು ಸಿಲುಕಿರುವ ಶಂಕೆ!

Untitled design - 2024-06-14T140507.133
Published on

ಕೊಲ್ಕತ್ತಾ: ಇಂದು (ಜೂ.14) ನಗರದ ಆಕ್ರೊಪೊಲಿಸ್ ಮಾಲ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಮೂಲಗಳ ಪ್ರಕಾರ ಮಾಲ್ ಆವರಣದೊಳಗಿದ್ದ ಎಲ್ಲರನ್ನೂ ತಕ್ಷಣವೇ ಹೊರಗೆ ಕರೆತರಲಾಗಿದೆ ಎಂದು ಹೇಳಲಾಗಿದೆ. ಆದರೆ, ಇನ್ನೂ ಹಲವರು ಕಟ್ಟಡದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಮಾಲ್​ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಒಳಗೆ ಸಿಲುಕಿರುವವರನ್ನು ರಕ್ಷಿಸಲು ರಕ್ಷಣಾ ದಳದವರು ಕಟ್ಟಡದ ಗಾಜಿನ ಡೋರ್​ ಅನ್ನು ಒಡೆದು, ಒಳಗೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.

ಮಾಲ್​ನ ಫುಡ್​ ಕೋರ್ಟ್​ನಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯದ ಮಟ್ಟಿಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net