

Fire Breaks: ಗುಜರಾತ್ನ ರಾಜ್ಕೋಟ್ ಪ್ರದೇಶವೊಂದರಲ್ಲಿ ಬೃಹತ್ ಗಾತ್ರದ ಆಪಾರ್ಟ್ಮೆಂಟ್ನಲ್ಲಿ ಬೆಂಕಿ ಕಾಂಣಿಸಿಕೊಂಡಿದೆ. ಈ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಮೂವರು ಬಲಿಯಾಗಿದ್ದಾರೆ. ಅಲ್ಲದೆ ಕಟ್ಟಡದಲ್ಲಿ ಸಿಲುಕಿದ್ದ 50 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
150 ಅಡಿ ರಿಂಗ್ ರೋಡ್ನಲ್ಲಿರುವ ಅಂಟ್ಲಾಟಿಸ್ ಹೆಸರಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಬೆಂಕಿಯ ಕೆನ್ನಾಲಿಗೆ ಕಟ್ಟಡದ ಇತರ ಭಾಗಗಳಿಗೂ ಮತ್ತುಷ್ಟು ಅವರಿಸುತ್ತಿದೆ. ಆಗ್ನಿಶಾಮಕದಳ ಸಿಬ್ಬಂದಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇನ್ನು ಅಪಾರ್ಟ್ಮೆಂಟ್ನಲ್ಲಿ ಎಷ್ಟು ಜನರಿದ್ದಾರೆ ಎಂದು ತಿಳಿಯದು ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.(ಏಜೆನ್ಸೀಸ್)