ಉಪ ಚುನಾವಣೆಗೆ ರಣ ತಂತ್ರ ಹೆಣೆದ ಬಿಜೆಪಿ ಮುಖಂಡರು: ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ನಡೆದಿದ್ದೇನು?

Yediyurappa 20 april 20
Yediyurappa
Published on

ಬೆಂಗಳೂರು: ಉಪ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನಲೆ ತಕ್ಷಣದಿಂದಲೇ ಸಚಿವರು ಕಾರ್ಯಪ್ರವೃತ್ತರಾಗಿ ಹೆಚ್ಚಿನ‌ ಸಮಯವನ್ನು ಆಯಾ ಕ್ಷೇತ್ರಕ್ಕೆ ನೀಡಬೇಕೆಂಬ ಬಗ್ಗೆ ಬುಧವಾರ ಸಂಜೆ ನಡೆದ ಸಂಪುಟ ಭೆಯಲ್ಲಿ ಚರ್ಚೆ ನಡೆದಿದೆ.

ಸಭೆಯ ಅಜೆಂಡಾ ವಿಚಾರ ಮುಗಿಸಿದ ಬಳಿಕ ಅಧಿಕಾರಿಗಳನ್ನು ಹೊರಗೆ ಕಳಿಸಿ ಅನೌಪಚಾರಿಕವಾಗಿ ಉಪ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಉಪ ಚುನಾವಣೆ ನಡೆಯುತ್ತಿರುವ ಮೂರು ಕಡೆಯೂ ನಮ್ಮ ಅಭ್ಯರ್ಥಿಗಳೇ ಗೆಲ್ಲಬೇಕು, ಕಾಂಗ್ರೆಸ್‌ನಿಂದ ಪ್ರಬಲ‌ ಪೈಪೋಟಿ ಎದುರಾಗಬಹುದು, ನಾವು ಅಷ್ಟೇ ಪ್ರಮಾಣದಲ್ಲಿ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟುಕೊಡಬಾರದು ಎಂಬ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.

ಅಧಿವೇಶನವನ್ನು‌ ಮೊಟಕು ಗೊಳಿಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net