ಗರ್ಭಿಣಿಯರಲ್ಲಿನ ಅಪೌಷ್ಢಿಕತೆ ನೀಗಿಸಲು ಕ್ರಮ; ಮಾತೃಪೂರ್ಣ ಯೋಜನೆಗೆ 8.10 ಲಕ್ಷ ಗರ್ಭಿಣಿಯರು

Lakshmi Hebbalakar Meeting 7
Published on

ಬೆಂಗಳೂರು:
ಮಾತೃಪೂರ್ಣ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 8,10,845 ಗರ್ಭಿಣಿ ಮತ್ತು ಬಾಣಂತಿಯರು ಪ್ರಯೋಜನ ಪಡೆಯುತ್ತಿದ್ದು, ಅಪೌಷ್ಠಿಕತೆ ನಿವಾರಣೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮಹಿಳಾ ಮಟ್ಟ ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ ಅವರು ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅವಧಿಪೂರ್ವಕ್ಕೂ ಮುನ್ನ ಜನಿಸಿದ ಮಕ್ಕಳಲ್ಲಿ ರಕ್ತದ ಕೊರತೆ ಹಾಗೂ ಗರ್ಭಿಣಿಯರಲ್ಲಿನ ಅಪೌಷ್ಟಿಕತೆ ಕುರಿತಂತೆ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ಉತ್ತರಿಸಿದ ಸಭಾನಾಯಕರಾದ ಎನ್.ಎಸ್ ಬೋಸರಾಜು, ಸದರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಮಾತೃಪೂರ್ಣ ಯೋಜನೆ, ಆರೋಗ್ಯ ತಪಾಸಣೆ ಸೇರಿದಂತೆ ಇತರ ಆರೋಗ್ಯ ಸೇವೆಗಳನ್ನು ಜಾರಿಗೊಳಿಸಿದೆ. ಎಲ್ಲಾ ತಾಲ್ಲೂಕುಗಳಲ್ಲಿರುವ 69,919 ಅಂಗನವಾಡಿ ಕೇಂದ್ರಗಳಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕಾಂಶವುಳ್ಳ ಮಧ್ಯಾಹ್ನದ ಬಿಸಿಯೂಟವನ್ನು ಅಂಗನವಾಡಿ ಕೇಂದ್ರದಲ್ಲಿಯೇ ನೀಡಲಾಗುತ್ತಿದೆ. ಯೋಜನೆಯಡಿ ನೀಡುತ್ತಿರುವ ಬಿಸಿಯೂಟ 1342 ಕ್ಯಾಲೊರಿ ಇದ್ದು 41 ಗ್ರಾಂ ಪ್ರೋಟೀನ್ ಮತ್ತು 578 ಮಿಲಿಗ್ರಾಮ್ ಕ್ಯಾಲ್ಸಿಯಮ್ ಒಳಗೊಂಡಿರುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net