ಮೌನೇಶ್ವರ ಜಯಂತಿ ಆಚರಣೆ ಫೆ. 4ರಂದು

je721538035802367-abc
Published on

ರಾಣೆಬೆನ್ನೂರ: ಇಲ್ಲಿಯ ಶ್ರೀ ಮೌನೇಶ್ವರ ದೇವಸ್ಥಾನ ಕಮಿಟಿ ವತಿಯಿಂದ ಫೆ. 4ರಂದು ಬೆಳಗ್ಗೆ 11ಕ್ಕೆ ನಗರದ ಶ್ರೀ ಮೌನೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಜಗದ್ಗುರು ಮೌನೇಶ್ವರರ ಜಯಂತಿ ಸಮಾರಂಭ ಜರುಗಲಿದೆ.

ಅಂತರವಳ್ಳಿ ಮೂರುಝಾವಧೀಶ್ವರ ಮಠದ ನಿರಂಜನ ಸ್ವಾಮೀಜಿ, ಚನ್ನಗಿರಿ ತಾಲೂಕು ವಡ್ಡನಹಾಳ ಜಗದ್ಗುರು ವಿಶ್ವಕರ್ಮ ಸಂಸ್ಥಾನ ಸಾವಿತ್ರಿ ಪೀಠದ ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ಮೌನೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಪರಮೇಶ್ವರಾಚಾರ್ಯ ಬಡಿಗೇರ ಅಧ್ಯಕ್ಷತೆ ವಹಿಸುವರು.

ಹುಬ್ಬಳ್ಳಿ-&ಧಾರವಾಡ ಮಹಾಪೌರ ರಾಮಣ್ಣ ಬಡಿಗೇರ, ಜೆಡಿಎಸ್​ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ನಗರಸಭೆ ಸದಸ್ಯರಾದ ಪ್ರಕಾಶ ಬುರಡಿಕಟ್ಟಿ, ಕವಿತಾ ಹೆದ್ದೇರಿ, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಗಣೇಶಪ್ಪ ಕಮ್ಮಾರ, ರಾಜ್ಯೋತ್ಸವ ಪ್ರಶಸ್ತಿ ಪುರಸತ ವಿರೂಪಾಕ್ಷಪ್ಪ ಹಾವನೂರ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net