ಪ್ರತಿಯೊಬ್ಬರೂ ಉತ್ತಮ ಜೀವನ ರೂಪಿಸಿಕೊಳ್ಳಿ

07 HANUR 4
ಹನೂರಿನಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ನಾಯಕ ಸಮುದಾಯದ ಮಕ್ಕಳನ್ನು ಸನ್ಮಾನಿಸಲಾಯಿತು. ಶಾಸಕ ಎಂ.ಆರ್ ಮಂಜುನಾಥ್, ಮಂಜೇಶ್, ಶಿವಮೂರ್ತಿ, ಹುಚ್ಚಯ್ಯ ಇತರರು ಇದ್ದರು.
Published on

ಹನೂರು: ಪ್ರತಿಯೊಬ್ಬರೂ ಶಿಕ್ಷಿತರಾಗಿ ಸಾಧನೆ ಮಾಡುವುದರ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಶ್ರೀ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ನಾಯಕ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅವರ ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿನ ಅಂಶಗಳು ಉತ್ತಮ ಬದುಕನ್ನು ಕಟ್ಟಿಕೊಳ್ಳಲು, ಉತ್ತಮ ಸಮಾಜವನ್ನು ನಿರ್ಮಿಸಲು ಸಹಕಾರಿಯಾಗಿದೆ. ಹಾಗಾಗಿ ಇವರ ಆದರ್ಶ ಎಲ್ಲರಿಗೂ ದಾರಿದೀಪವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಜೀವನದಲ್ಲಿ ಮುನ್ನೆಡೆಯಬೇಕು. ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಹಾಗೆಯೇ ಮಾನಸಿಕ ಹಾಗೂ ಬೌದ್ಧಿಕ ಬೆಳೆವಣಿಗೆಯ ದೃಷ್ಠಿಯಿಂದ ಕ್ರೀಡೆಗೂ ಆದ್ಯತೆ ನೀಡಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ಈ ದಿಸೆಯಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಹನೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳಿದ್ದು, ಉತ್ತಮ ಸಾಧನೆ ಮಾಡಿದ್ದಾರೆ. ಹಾಗಾಗಿ ಮಹದೇಶ್ವರ ಕ್ರೀಡಾಂಗಣಕ್ಕೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದರ ಜತೆಗೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ರೂಪುರೇಷೆ ಸಿದ್ಧಪಡಿಸಲಾಗಿದೆ. ಸರ್ಕಾರದಿಂದ 3 ಕೋಟಿ ರೂ. ಅನುದಾನ ದೊರಕಿದೆ. ಜತೆಗೆ ಇನ್ನೂ 3 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಗಾಗಿ ಕ್ರೀಡಾಂಗಣದ ಅಭಿವೃದ್ಧಿ ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.

ಪಿಎಸಿಸಿ ನಿರ್ದೇಶಕ ಮಂಜೇಶ್, ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ತಾಪಂ ಮಾಜಿ ಸದಸ್ಯ ಮಹದೇವ, ಪಪಂ ಸದಸ್ಯರಾದ ಮಹೇಶ್‌ನಾಯಕ, ಮಹೇಶ್, ಮುಖಂಡರಾದ ಮುತ್ತಪ್ಪನಾಯ್ಕ, ಹುಚ್ಚಯ್ಯ, ಜೆಸ್ಸಿಂಪಾಷ, ಮಣಿ, ನಟರಾಜು ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net