ಪದವಿಪೂರ್ವ ಅಂಕದ ಮೇಲೆ ಎಂಬಿಎ ಪ್ರವೇಶ; ಶಿಕ್ಷಣ ಸಂಸ್ಥೆಗಳ ನಿರ್ಧಾರ

nation-2
Published on

ನವದೆಹಲಿ: ಪದವಿಪೂರ್ವ ಅಂಕಗಳನ್ನು ಪರಿಗಣಿಸಿ ಎಂಬಿಎ ಮತ್ತು ಪಿಜಿಡಿಎಂ ಕೋರ್ಸ್​ಗಳಿಗೆ ಪ್ರವೇಶ ನೀಡಲು ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಈ ಕುರಿತು ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಿದೆ. ಇದು 2020-21ರ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತವಾಗಿದೆ. ಮುಂದಿನ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕವೇ ಕೋರ್ಸ್​ಗಳಿಗೆ

ಪ್ರವೇಶ ಸಿಗಲಿದೆ ಎಂದು ಸ್ಪಷ್ಟನೆ ನೀಡಿದೆ. ಕರೊನಾ ಭೀತಿ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಅಂಕವನ್ನೇ ಪರಿಗಣಿಸಿ ಪ್ರವೇಶ ನೀಡಲು ನಿರ್ಧರಿಸಲಾಗಿದೆ ಎಂದು ಎಐಸಿಟಿಇ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net