

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್ಜಿಯುಎಚ್ಎಸ್) ಎಂಬಿಬಿಎಸ್ ಪರೀಕ್ಷೆಗಳನ್ನು ಮುಂದೂಡಿದೆ.
ವೇಳಾಪಟ್ಟಿ ಪ್ರಕಾರ ಸೆ.15ರಿಂದ ಎಂಬಿಬಿಎಸ್ ಪರೀಕ್ಷೆ ನಡೆಯಬೇಕಿತ್ತು. ಆದರೆ, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಅ.13ಕ್ಕೆ ನಡೆಸಲು ನಿರ್ಧರಿಸಿದೆ. ಇದನ್ನೂ ಓದಿರಿ ಕ್ರೀಡಾ ಪ್ರಶಸ್ತಿಗೆ ರಾಜೀವ್ ಗಾಂಧಿ ಹೆಸರೇಕೆ? ಬದಲಾಯಿಸಿ ಎಂದ ಕುಸ್ತಿಪಟು ಬಬಿತಾ ಪೋಗಟ್
ಮುಂದಿನ 15 ದಿನಗಳು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸುವಂತೆ ಎಲ್ಲ ಸಂಯೋಜಿತ ಕಾಲೇಜುಗಳಿಗೆ ತಿಳಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ಕೆ.ಬಿ.ಲಿಂಗೇಗೌಡ ತಿಳಿಸಿದ್ದಾರೆ.