ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ವೈದ್ಯಕೀಯ ಕಾಲೇಜು

BSY
Published on

ಕೊಡಗು: ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಇನ್ನೆರಡು ವರ್ಷದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸಹಕಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಪ್ರಥಮವಾಗಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು.

ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದ ಸಿಎಂ, ಅರ್ಹ ಶಾಸಕರಿಗೆ ಹಾಗೂ ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದೆ ನಿರ್ಗಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net