

ಮಡಿಕೇರಿ:
ಕೊಡಗು ಜಿಲ್ಲೆಗೆ ಸಂಬAಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಎರಡನೇ ಸಭೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ವಿಧಾನ ಸೌಧ ಕೊಠಡಿ ಸಂಖ್ಯೆ 106ರಲ್ಲಿ ಸೋಮವಾರ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಸಭೆಯ ಸದಸ್ಯರುಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಡಾ. ಶ್ರೀನಿವಾಸ ಎನ್. ಟಿ, ಭೀಮಾಣ್ಣ ಟಿ ನಾಯ್ಕ ಭಾಗವಹಿಸಿದ್ದರು.
ಕಂದಾಯ ಸಚಿವರು ಈ ತಿದ್ದುಪಡಿ ವಿಧೇಯಕದ ಕುರಿತು ಸಭೆಯಲ್ಲಿ ವಿವರಿಸಿ ಅಧಿಕಾರಿಗಳಿಂದ ವಿವರಣೆ ಪಡೆದರು. ಎ.ಎಸ್. ಪೊನ್ನಣ್ಣ ಅವರು ಸಭೆಯಲ್ಲಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬAಧಿಸಿದAತೆ ಸಂಪೂರ್ಣವಾಗಿ ವಿವರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲ ಬಿಸ್ವಾಸ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧಿಕಾರಿಗಳು, ವಿಧಾನ ಸಭೆಯ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.