ಆತ್ಮಸಾಕ್ಷಿಯಂತೆ ಕರ್ತವ್ಯ ನಿರ್ವಹಿಸಿ

ಆತ್ಮಸಾಕ್ಷಿಯಂತೆ ಕರ್ತವ್ಯ ನಿರ್ವಹಿಸಿ
Published on

ಮೈಸೂರು: ಶಿಕ್ಷಕರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ತಮ್ಮ ವೃತ್ತಿಯನ್ನು ಗೌರವಿಸಿದಂತಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ತಿಳಿಸಿದರು.

ಪಿರಿಯಾಪಟ್ಟಣ ತಾಲೂಕು ರಾವಂದೂರು ಸಮೀಪದ ಮಾಕೋಡುಶೆಟ್ಟಹಳ್ಳಿ ಸರ್ಕಾರಿ ಹಿರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಶಿಕ್ಷಕರ ವೃತ್ತಿ ಪವಿತ್ರವಾದದ್ದು. ಸಮಾಜದಲ್ಲಿ ಹೆಚ್ಚಿನ ಗೌರವವನ್ನು ಶಿಕ್ಷಕರಿಗೆ ನೀಡಲಾಗಿದೆ. ಈ ಹಿನ್ನೆಲೆ ಶಿಕ್ಷಕರು ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಪ್ರಾಮಾಣಿಕತೆಯಿಂದ ವರ್ಗಾಯಿಸಿದಾಗ ಮಾತ್ರ ಆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದರು.

ಸರ್ಕಾರವು ನಿಗದಿಪಡಿಸಿದ ಸಮಯಕ್ಕೆ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಕೌಶಲವನ್ನು ಧಾರೆ ಎರೆಯಬೇಕು. ಜತೆಗೆ, ವಿದ್ಯಾರ್ಥಿಗಳ ಪೋಷಕರ ಜತೆಯೂ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯಶಿಕ್ಷಕ ರಾಮರಾಜು, ಸಿಆರ್‌ಪಿಗಳಾದ ನಾಗೇಶ್, ಸೋಮಶೇಖರ್, ಗುರುರಾಘವೇಂದ್ರ, ಕವಿತಾ, ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net