ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಇಂದು ಮತ್ತೊಂದು ಸಭೆ; ಕೈಗೊಂಡ ನಿರ್ಧಾರವಿದು...

Panchamasali
Published on

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವ ಕುರಿತು ಕಳೆದ ಕೆಲವು ದಿನಗಳಿಂದ ಬೇಡಿಕೆ ವ್ಯಕ್ತವಾಗುತ್ತಲೇ ಇದ್ದು, ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸುವ ಹಂತದವರೆಗೂ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಸುತ್ತಿನ ಸಭೆ ನಡೆದಿದ್ದು, ಹೊಸದೊಂದು ನಿರ್ಧಾರ ಹೊರಬಿದ್ದಿದೆ.

ಇಂದಿನ ಸಭೆ ಹಾಗೂ ಅಲ್ಲಿ ಕೈಗೊಂಡ ನಿರ್ಧಾರದ ಕುರಿತು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಜಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಇಂದು ಸಚಿವ ಸಿ.ಸಿ. ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿನ ನಿರ್ಣಯಗಳನ್ನು ಸ್ವಾಮೀಜಿ ತಿಳಿಸಿದರು.

ಸಚಿವ ಸಿ.ಸಿ.ಪಾಟೀಲ್ ಮತ್ತು ಶಾಸಕ ಯತ್ನಾಳ್ ಅವರು ಮುಖ್ಯಮಂತ್ರಿಯವರ ಜತೆ ಮಾತನಾಡಿ ಆಗಸ್ಟ್ 22ರ ಒಳಗೆ ಮೀಸಲಾತಿ ಒದಗಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ನಮ್ಮ ಹೋರಾಟ ಮುಂದೂಡಿದ್ದೇವೆ. ಒಂದು ವೇಳೆ ಆಗಸ್ಟ್ 22ರ ಒಳಗೆ ಅವರು ಮೀಸಲಾತಿ ಘೋಷಣೆ ಮಾಡದಿದ್ದರೆ, ಸಿಎಂ ನಿವಾಸದ ಎದುರು ಸತ್ಯಾಗ್ರಹ ನಡೆಸುತ್ತೇವೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net