ಸಂಸತ್ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಬಿಜೆಪಿ ಎಂಪಿ ಡಾ.ಕೆ. ಸುಧಾಕರ್ ನೇಮಕ

k sudhakar
Published on

ಬೆಂಗಳೂರು: ಕೇಂದ್ರದ ಸ್ಥಾಯಿ ಸಮಿತಿಯನ್ನು ರಚಿಸಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಸಂಸತ್​ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ.

ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್​ಗೆ ಅಭಿನಂದನೆ ತಿಳಿಸಿದೆ. ಬಿಜೆಪಿಯ ಭರ್ತೃಹರಿ ಮಹತಾಬ್​ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಶಶಿ ತರೂರ್ ಅವರನ್ನು​ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದು, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net