ಆಳ್ವಾಸ್ ಹೆಲ್ತ್ ಸೆಂಟರ್‌ನ ನರ್ಸಿಂಗ್ ಅಧೀಕ್ಷಕಿ ಜುಲೇಖಾ ಖಾನ್ ಮಾತನಾಡಿ, ಭಾರತದಲ್ಲಿ ನರ್ಸಿಂಗ್ ಕ್ಷೇತ್ರವು ಕಳೆದ ಹಲವು ವಷರ್ಗಳಲ್ಲಿ ಬಹುಬೇಡಿಕೆಯ ವೃತ್ತಿಯಾಗಿದೆ. ಆಧುನಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಈ ವೃತ್ತಿಗೆ ಹೆಚ್ಚಿನ ಗೌರವವಿದೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಲ್ಲಿಯೂ ಭಾರತೀಯ ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದ್ದು, ನಮ್ಮ ದಾದಿಯರು ಸೇವಾ ಮನೋಭಾವದಿಂದ ಉತ್ತಮ ಹೆಸರು ಗಳಿಸಿದ್ದಾರೆ ಎಂದು ತಿಳಿಸಿದರು.