

ಹಾನಗಲ್ಲ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಕಲ್ಲಹಕ್ಕಲ ಓಣಿಯಲ್ಲಿ ಭಾನುವಾರ ನಡೆದಿದೆ.
ಬಸವರಾಜ ಮಾದೇವಪ್ಪ ಹವಳಿನಾಯ್ಕ (55) ಆತ್ಮಹತ್ಯೆ ಮಾಡಿಕೊಂಡವರು.
ಇವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.