'ಅಮಿತ್‌ ಶಾ'ರನ್ನು ಭೇಟಿ ಮಾಡಿ ಅಭಿವೃದ್ಧಿಗಳ ಬಗ್ಗೆ ಚರ್ಚಿಸಲಾಯ್ತು; ಹೆಚ್​.ಡಿ ಕುಮಾರಸ್ವಾಮಿ| amit shah

hdk
Published on

ನವದೆಹಲಿ: ಜೆಡಿಎಸ್​ ನಾಯಕ ಹಾಗೂ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರು ಇಂದು(ಆ.21) ದೆಹಲಿಯ ಸಂಸತ್‌ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇನ್ನೂ ಈ ಭೇಟಿಯ ಬಗ್ಗೆ ಕುಮಾರಸ್ವಾಮಿ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದು, ಅಭಿವೃದ್ಧಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದೇನು.?

(ಏಜೆನ್ಸೀಸ್)

ರಾಷ್ಟ್ರದ ಗೌರವಾನ್ವಿತ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್​ಶಾ ಅವರನ್ನು ಸಂಸತ್ತಿನ ಕಚೇರಿಗೆ ತೆರಳಿ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಹಾಗೂ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಚರ್ಚೆ ನಡೆಸಲಾಯ್ತು. ಅಭಿವೃದ್ಧಿಯ ಪಥದಲ್ಲಿ ಅಮಿತ್​ ಶಾ ಅವರ ಮಾರ್ಗದರ್ಶನ ಮತ್ತು ಬೆಂಬಲವು ಅತ್ಯಂತ ಮೌಲ್ಯಯುತವಾಗಿದೆ ಎಂದು ಸೋಷಿಯಲ್​ ಮೀಡಿಯಾದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net