ಮ್ಯಾಂಡಸ್‌ ಚಂಡಮಾರುತ ಎಫೆಕ್ಟ್; ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Rain-BNG
Published on

ಬೆಂಗಳೂರು: ಮ್ಯಾಂಡಸ್‌ ಚಂಡಮಾರುತದಿಂದಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ವಿವಿಧ ಭಾಗಗಳಲ್ಲಿ ಡಿ.12ರ ವರೆಗೆ ಮೋಡ ಕವಿದ ವಾತಾವರಣ, ಚಳಿ, ಹಾಗೂ ಮಳೆ ಆಗಲಿದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಇದೀಗ ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ನಾಳೆ(ಡಿ.13) ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಎಲ್ಲೆಲ್ಲಿ ಯಲ್ಲೋ ಅಲರ್ಟ್?
ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಣೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net