ಇಂದಿನಿಂದ 3 ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Rain
Published on

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಇಂದಿನಿಂದ ಮೂರು ದಿನ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಈ ಗ್ರಾಮದಲ್ಲಿ ಜಾನವಾರುಗಳಿಗೂ ವಾರಾಂತ್ಯ ರಜೆ ಇದೆ!

ಇಂದು ಕೊಡಗು, ಬೀದರ್, ಕಲಬುರಗಿ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಹಗುರು ಮಳೆ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net