ಕೇರಳದ 'ಚಿನ್ನ' ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಿದ ಕೇಂದ್ರ ಸರ್ಕಾರ

Gold
Published on

ತಿರುವನಂತಪುರಂ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಿಕ್ಕ 30 ಕೆ.ಜಿ. ತೂಕದ ಚಿನ್ನದ ಪ್ರಕರಣ ದಿನೇದಿನೆ ಕಗ್ಗಂಟಾಗುತ್ತಿದೆ.

ಪ್ರಕರಣವನ್ನು ಸಿಬಿಐನಂತಹ ಯಾವುದಾದರೂ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಕೇರಳದ ಕಾಂಗ್ರೆಸ್​ ಒತ್ತಾಯಿಸಿದೆ.

ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಈ ಸ್ಮಗ್ಲಿಂಗ್​ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ)ಕ್ಕೆ ವಹಿಸಿದೆ.

ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿರುವ ಚಿನ್ನದ ಹಿಂದೆ ಮುಖ್ಯಮಂತ್ರಿ ಕಚೇರಿಯ ಕೈವಾಡವೂ ಇದೆ. ಸಿಎಂ ಪಿಣರಾಯಿ ವಿಜಯನ್​ ರಾಜೀನಾಮೆ ನೀಡಬೇಕು ಎಂದು ಕೇರಳದಲ್ಲಿ ಪ್ರತಿಪಕ್ಷಗಳು ಆಗ್ರಹ ಮಾಡಿದ್ದವು. ಅದಾದ ಬಳಿಕ ಪಿಣರಾಯಿ ವಿಜಯನ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಗಳಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಕರೊನಾ ಸೋಂಕಿನ ಬಗ್ಗೆ ಈಗ ಎಚ್ಚೆತ್ತುಕೊಂಡ ಪಾಕಿಸ್ತಾನ ಸರ್ಕಾರ; ಒಂದು ದಾಖಲೆಯನ್ನೂ ಮಾಡಿದೆ…

ಸಿಎಂ ಪತ್ರಕ್ಕೆ ಮಾನ್ಯತೆ ನೀಡಿ ಕೇರಳ ಸ್ಮಗ್ಲಿಂಗ್ ತನಿಖೆಯನ್ನು ಎನ್​ಐಎಗೆ ವಹಿಸಲಾಗಿದೆ. ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಳೆದವಾರ ಏರ್​ಪೋರ್ಟ್​ನಲ್ಲಿ ರಾಜತಾಂತ್ರಿಕ ಬ್ಯಾಗೇಜ್​​ನಲ್ಲಿ 30 ಕೆಜಿ ಚಿನ್ನ ಪತ್ತೆಯಾಗಿತ್ತು. ಇದು ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ ಕಚೇರಿಗೆ ಸೇರಿದ್ದು ಎಂಬುದು ಗೊತ್ತಾಗಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net