ಪುಲ್ವಾಮಾದಲ್ಲಿ ಎನ್​ಕೌಂಟರ್​ಗೆ ಒಬ್ಬ ಉಗ್ರ ಬಲಿ

Kashmir Shopian
Published on

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಪುಲ್ವಾಮಾ ಜಿಲ್ಲೆಯಲ್ಲಿ ರಕ್ಷಣಾ ಪಡೆಗಳೊಂದಿಗಿನ ಎನ್​ಕೌಂಟರ್​ನಲ್ಲಿ ಒಬ್ಬ ಉಗ್ರ ಹತಗನಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಪಾಂಪೋರ್​ ಎಂಬಲ್ಲಿನ ಲಾಲ್​ಪೋರಾದಲ್ಲಿ ಗುರುವಾರ ಸಂಜೆ ಭದ್ರತಾ ಪಡೆಗಳು ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿವೆ. ಶೋಧ ಕಾರ್ಯ ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲಿಂದ ಪರಾರಿಯಾಗುವುದಕ್ಕೂ ಪ್ರಯತ್ನಿಸಿದ್ದಾರೆ.

ಇದೇ ವೇಳೆ ಯೋಧರು ಪ್ರತಿದಾಳಿ ನಡೆಸಿದ್ದು, ಅದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡೇ ಭದ್ರತಾ ಪಡೆ ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net