

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಪೊಲೀಸರ ತಂಡ, ಸೇನೆಯ 09 ಆರ್ಆರ್ ಮತ್ತು ಸಿಆರ್ಪಿಎಫ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆಯಿತು.
ತಂಡವು ಶಂಕಿತ ಸ್ಥಳವನ್ನು ಸುತ್ತುವರಿಯುತ್ತಿದ್ದಂತೆ, ಅಡಗಿದ ಉಗ್ರರು ಅವರ ಮೇಲೆ ಗುಂಡು ಹಾರಿಸಿದರು. ಜಂಟಿ ತಂಡವು ಪ್ರತಿಯಾಗಿ ಗುಂಡಿನ ದಾಳಿ ನಡೆಸಿತು. ಇದು ಎನ್ಕೌಂಟರ್ ಗೆ ಪ್ರಚೋದನೆಯಾಯಿತು.
ಇದರಿಂದ ಮತೊಬ್ಬ ಉಗ್ರನ ಹತ್ಯೆಯಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಡಗಿರಬಹುದಾದ ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು ಸಹ ಗಾಯಗೊಂಡಿದ್ದು, ಅವರ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ 92 ಬೇಸ್ ಆಸ್ಪತ್ರೆಗೆ ಸೇರಿಸಲಾಗಿದೆ.