

ನವದೆಹಲಿ: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ನಾಲ್ಕು ಚಿನ್ನದ ಪದಕಗಳನ್ನು ಗೆದ್ದುಕೊಟ್ಟ ಖ್ಯಾತ ಅಥ್ಲೀಟ್ ಮಿಲ್ಖಾ ಸಿಂಗ್ (91) ಶುಕ್ರವಾರ ನಿಧನರಾಗಿದ್ದಾರೆ.
'ಫ್ಲೈಯಿಂಗ್ ಸಿಖ್' ಎಂದೇ ಖ್ಯಾತಿ ಪಡೆದಿದ್ದ ಮಿಲ್ಖಾ ಸಿಂಗ್, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜೂನ್ 3ರಂದು ಚಂಡೀಗಡದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಪತ್ನಿ ನಿರ್ಮಲ್ ಕೌರ್ ಕೂಡ ಮೊನ್ನೆಯಷ್ಟೇ ಕರೊನಾದಿಂದಾಗಿ ಮೃತಪಟ್ಟಿದ್ದರು.
ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.