ಹಿರಿಯ ಪತ್ರಕರ್ತ ಮಿಂಚು ಶ್ರೀನಿವಾಸ್ (60) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಾಯಿ, ಪತ್ನಿ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ: ಮಿಂಚು ಶ್ರೀನಿವಾಸ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಂತಾಪ ವ್ಯಕ್ತಪಡಿಸಿವೆ.