

ಶ್ರೀನಗರ: ಜಮ್ಮು ಕಾಶ್ಮೀರದ ದೋಡಾ ಬಳಿ ಮಿನಿ ಬಸ್ಸೊಂದು ಕಂದರಕ್ಕೆ ಬಿದ್ದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಇಂದು ತಾತ್ರಿಯಿಂದ ದೋಡಾಗೆ ಹೋಗುತ್ತಿದ್ದ ಬಸ್ಸಿನಲ್ಲಿದ್ದ ಇತರ ಹಲವರಿಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಯಾಣಿಕರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಜಮ್ಮು ಕಾಶ್ಮೀರ ಸರ್ಕಾರವು ದೋಡಾ ಅಪಘಾತದಲ್ಲಿ ಗಾಯಗೊಂಡಿರುವವರಿಗೆಲ್ಲ ಚಿಕಿತ್ಸೆ ಒದಗಿಸುತ್ತಿದೆ. ಮೃತರ ಕುಟುಂಬಗಳಿಗೆ ಲೆಫ್ಟಿನೆಂಟ್ ಗವರ್ನರ್ರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ರಸ್ತೆ ಅಪಘಾತ ಸಂತ್ರಸ್ತರ ನಿಧಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯಪಾಲರ ಕಛೇರಿ ಪ್ರಕಟಿಸಿದೆ. (ಏಜೆನ್ಸೀಸ್)