ಮಿನಿ ವಿಧಾನಸೌಧ ಎದುರು ಗ್ರಾಮ ಆಡಳಿತಾಧಿಕಾರಿಗಳ ಧರಣಿ

19-RNR-04
Published on

ರಾಣೆಬೆನ್ನೂರ: ಸೇವಾ ಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಟಕದ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ನಡೆಯುತ್ತಿರುವ ಅನಿಧಿರ್ಷ್ಟಾವಧಿ ಧರಣಿ ಸತ್ಯಾಗ್ರಹ ಬುಧವಾರ 10ನೇ ದಿನಕ್ಕೆ ಕಾಲಿಟ್ಟಿದೆ.

ನೇತೃತ್ವ ವಹಿಸಿದ್ದ ಸಂಘಟನೆಯ ತಾಲೂಕು ಅಧ್ಯಕ್ಷ ಬಸವಂತಕುಮಾರ ಮಾತನಾಡಿ, ಮೊಬೈಲ್​ ತಂತ್ರಾಂಶಗಳ ಕೆಲಸದ ವಿಚಾರವಾಗಿ ಈವರೆಗೂ ಆಗಿರುವ ಎಲ್ಲ ಅಮಾನತ್ತುಗಳನ್ನು ತಕ್ಷಣವೆ ರದ್ದುಪಡಿಸಿ ಹಿಂಪಡೆಯಬೇಕು. ಕೆ.ಸಿ.ಎಸ್​.ಆರ್​ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆದೇಶಿಸಬೇಕು.

ಅಂತರ ಜಿಲ್ಲಾದಲ್ಲಿ ಪತಿ-&ಪತ್ನಿ ಪ್ರಕರಣಗಳ ವರ್ಗಾವಣೆಗೆ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು. ಅಂತರ ಜಿಲ್ಲಾ ವರ್ಗಾವಣೆಯ ಕೆ.ಸಿ.ಎಸ್​.ಆರ್​ ನಿಯಮ 16ಎ ರ ಉಪಖಂಡ(2)ನ್ನು ಮರುಸ್ಥಾಪಿಸಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲ ಬಗೆಯ ವರ್ಚುವಲ್​ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು.

ಈವರೆಗೂ ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ನಿರ್ಲಕ್ಷ$್ಯತನ ತೋರುತ್ತಿದೆ. ಕಾಟಾಚಾರಕ್ಕೆ ಮಾತ್ರ ಸಭೆ ಕರೆದು ಯಾವುದೆ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದು ಖಂಡನೀಯವಾಗಿದೆ. ಆದ್ದರಿಂದ ಬೇಡಿಕೆಗಳು ಈಡೇರುವವರೆಗೂ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ನೌಕರರ ಸಂದ ತಾಲೂಕಾಧ್ಯಕ್ಷ ಮಂಜುನಾಥ ಕೆಂಚರೆಡ್ಡಿ, ಉಪಾಧ್ಯಕ್ಷ ಸಂಜೀವರೆಡ್ಡಿ ಭತ್ತೆರ, ಪ್ರಧಾನ ಕಾರ್ಯದಶಿರ್ ಕೋಟ್ರೇಶ ಎ.ಎಂ., ಖಜಾಂಚಿ ಬಸವರಾಜ ಎಡಿಕಾಲು, ಹಿರಿಯ ಗ್ರಾಮಧಿಕಾರಿ ಮಂಜುನಾಥ ಎಂ.ಎನ್​., ಹರೀಶ ಕೂನಬೇವು, ಗುರು ಲಮಾಣಿ, ಇಮಿಮ್​ ಜಾಫರ್​ ತಹಸೀಲ್ದಾರ್​, ಹನುಮಂತ ಯು., ಗಿರೀಶ ಪಾಟೀಲ, ದೀಪಾ ಎಂ.ಎಸ್​., ಪುಷ್ಪಾ ತೆಲಗಡೆ, ತರನಮ್​ ಆರ್​.ಜೆ., ವಿನೂತ ಪಿ.ಎಸ್​., ವಿಶಾಲ ಚಕ್ರಸಾಲಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net