ಸಚಿವರಿಗೆ ಸೇತುವೆ ನಿರ್ಮಾಣ ಮನವರಿಕೆ

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ಯಶವಂತ ಕುದ್ರೋಳಿ, ಚಂದ್ರಶೇಖರ ಶೆಟ್ಟಿ, ಸಿದ್ಧಾರ್ಥ್ ಉಪಸ್ಥಿತರಿದ್ದರು.
ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ಯಶವಂತ ಕುದ್ರೋಳಿ, ಚಂದ್ರಶೇಖರ ಶೆಟ್ಟಿ, ಸಿದ್ಧಾರ್ಥ್ ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜಕಾಲುವೆಗೆ 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ
  • ಕಾಮಗಾರಿಗೆ ಚಾಲನೆ
ಮಂಗಳೂರು: ಕೊಡಿಯಾಲ್‌ಬೈಲ್ ವಾರ್ಡ್‌ನ ತಾಳಿಪಾಡಿ ಮನೆ ಎದುರಿನ ಶರಾವತಿ ಅಪಾರ್ಟ್‌ಮೆಂಟ್ ಬಳಿಯ ರಾಜಕಾಲುವೆಗೆ 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಶಾಸಕರು ಮಾತನಾಡಿ, ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ರಾಜಕಾಲುವೆಯಲ್ಲಿ ನೀರು ಉಕ್ಕಿ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿತ್ತು. ಜನತೆಯ ಬೇಡಿಕೆಯಂತೆ ಈ ಪ್ರಮುಖ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪಕ್ಕದ ಎಂ.ಜಿ ರಸ್ತೆಯ ಭಾಗದಲ್ಲಿ ಒಂದು ಸೇತುವೆ ನಿರ್ಮಾಣವಾಗಬೇಕಿದ್ದು, ಅದಕ್ಕೆ 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅದು ಪೂರ್ಣಗೊಂಡರೆ ನೀರು ಸರಾಗವಾಗಿ ಹರಿದು ಹೋಗಿ ಇಲ್ಲಿ ಕೃತಕ ನೆರೆ ಕಡಿಮೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವರಿಕೆ ಮಾಡಲಾಗಿದೆ ಎಂದರು.
ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಮುಖರಾದ ಯಶವಂತ ಕುದ್ರೋಳಿ, ಚಂದ್ರಶೇಖರ ಶೆಟ್ಟಿ, ಸಿದ್ಧಾರ್ಥ್, ಜೀವಿತ್, ಮೀರಾ ಶೆಟ್ಟಿ, ಭಾರತಿ ಶೆಟ್ಟಿ, ಜಗನ್ನಾಥ್ ಶೆಟ್ಟಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net