

ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ; ಕರೊನಾ ಮರೆತು ಒಗ್ಗಟ್ಟು ಪ್ರದರ್ಶನಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ಇದ್ದರೂ ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸದೆ ಪ್ರತಿಭಟನೆ ನಡೆಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ಕೊವಿಡ್-19 ನಿಯಂತ್ರಣಾ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಜಾತ್ರೆಯಂತೆ ಪ್ರತಿಭಟನೆ ಮಾಡಿದ್ದಲ್ಲದೆ, ರಾಜ್ಯಪಾಲರಿಗೆ ದೂರು ನೀಡಲು ಹೋಗಿದ್ದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ. ಇದನ್ನೂ ಓದಿ:
ಇವರಿಗೆ ಸಮಾಜದ ಒಳಿತಿಗಿಂತಲೂ ಪ್ರಚಾರದ ಗೀಳು ಜಾಸ್ತಿ. ತಾವು ಇರುವ ಕತ್ತಲೆಯನ್ನು ಅರಿಯದವರು ಬೆಳಕಿಗಾಗಿ ಎಂದೂ ಹುಡುಕುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.