ಎಡಿಜಿಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸಚಿವ ಎಚ್.ಡಿ.ಕುಮಾರಸ್ವಾಮಿ ರಿಲೀಫ್

highcourt
Published on

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮಾ.18ರವರೆಗೆ ಹೈಕೋರ್ಟ್ ವಿಸ್ತರಿಸಿದೆ.

ಸಂಜಯನಗರ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸುರೇಶ್‌ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಚಂದ್ರಶೇಖರ್ ಅವರ ಪರ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜುರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಿ 2024ರ ನ.6ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಬಗ್ಗೆ ಸೂಕ್ತ ಅರ್ಜಿ ಸಲ್ಲಿಸಿದರೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ ಅರ್ಜಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು. ಅಲ್ಲಿಯವರೆಗೆ 2024ರ ನ.6ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net