ಶಾಲೆ ಹೊಸ ಕಟ್ಟಡ ನಿರ್ಮಿಸಿ

krishnabiregowda
ಆಲ್ದೂರು ಸಮೀಪದ ಚಂಡಗೋಡು ಗ್ರಾಮಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ಮಳೆಗೆ ಕುಸಿದು ಬಿದ್ದಿರುವ ಶಾಲೆ ಪರಿಶೀಲಿಸಿದರು. ಶಾಸಕಿ ನಯನಾ ಮೋಟಮ್ಮ, ಸಿಇಒ ಕೀರ್ತನಾ , ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಇದ್ದರು.
Published on

ಆಲ್ದೂರು: ದೊಡ್ಡಮಾಗರವಳ್ಳಿ ಗ್ರಾಪಂ ವ್ಯಾಪ್ತಿಯ ಚಂಡಗೊಡು ಗ್ರಾಮದಲ್ಲಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಪ್ರಾಥಮಿಕ ಶಾಲೆಗೆ ಸೋಮವಾರ ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಶಾಲೆ ನಡೆಯುವ ವೇಳೆ ಕಟ್ಟಡ ಕುಸಿದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ರಾತ್ರಿ ವೇಳೆ ಬಿದ್ದಿದ್ದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ಶಾಲಾ ಕಟ್ಟಡವನ್ನು ಸಂಪೂರ್ಣ ಕೆಡವಿ ಹೊಸ ಕಟ್ಟಡ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಕೆಳಗೂರು ಪೂರ್ಣೇಶ್ ಮಾತನಾಡಿ, ಭಾರಿ ಮಳೆಗೆ ಆಲ್ದೂರು ಹೋಬಳಿಯಲ್ಲಿ ದಾಖಲೆ ಇಲ್ಲದ ಜಾಗದಲ್ಲಿ ನಿರ್ಮಿಸಿಕೊಂಡಿರುವ ಸುಮಾರು 15 ಮನೆಗಳು ಕುಸಿದು ಬಿದ್ದಿದ್ದು ಅಂತಹ ಮನೆಗಳಿಗೆ ಸರ್ಕಾರದ ಪರಿಹಾರ ಸಿಗುವುದಿಲ್ಲ. ಇಂತಹ ಕುಟುಂಬಗಳಿಗೂ ನೆರವು ನೀಡುವಂತೆ ಮನವಿ ಮಾಡಿದರು.
ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜಿಪಂ ಸಿಇಒ ಕೀರ್ತನಾ, ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ತಹಸೀಲ್ದಾರ್ ಸುಮಂತ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಮುದಾಬೀರ್, ಗ್ರಾಪಂ ಅಧ್ಯಕ್ಷೆ ಜಯಶೀಲಾ, ಮೇಘ್ನಾ, ತಾಪಂ ಇಒ ತಾರನಾಥ್, ಬಿಇಒ ರವೀಶ್, ಕಂದಾಯ ಅಧಿಕಾರಿ ವೆಂಕಟೇಶ್ ಹಾಗೂ ಗ್ರಾಪಂ ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net