ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿಕೆ

Lakshmi Hebbalkar
Published on

ಬೆಂಗಳೂರು: ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯು ಗೊಂದಲದ ಗೂಡಾದಂತಿದೆ. ಮಕ್ಕಳು ತೆರಿಗೆ ಪಾವತಿ ಮಾಡಿದರೂ ಆ ಕುಟುಂಬಕ್ಕೆ ಅಥವಾ ತಾಯಿಗೆ 2000 ರೂಪಾಯಿ ಸಿಗುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ಈ ಹೇಳಿಕೆಯಿಂದ  ಜನರು ಸಾಕಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

ದಿನಕ್ಕೊಂದು, ಒಂದರ ಮೇಲೊಂದು ಗ್ಯಾರಂಟಿ ವಿಧಿಸುತ್ತಿರುವ ಸರ್ಕಾರವು ಮಾರ್ಗಸೂಚಿಯಲ್ಲಿ ಇಲ್ಲದ ಹೊಸದೊಂದು ಕಂಡಿಷನ್ ಸೇರ್ಪಡೆ ಮುಂದಾಗಿದೆಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಪತಿ, ಪತ್ನಿ ಇಬ್ಬರಲ್ಲಿ ಯಾರಾದರೂ ಒಬ್ಬರು ತೆರಿಗೆ ಪಾವತಿ ಮಾಡುತ್ತಿದ್ದರೆ ಈ ಯೋಜನೆ ಅನ್ವಯ ಇಲ್ಲ ಅಂತ ಸರ್ಕಾರವು ಆದೇಶ ಹೊರಡಿಸಿತ್ತು. 

ಆದರೆ ಸಚಿವೆಯ ಈ ಹೇಳಿಕೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಒಟ್ಟಿನಲ್ಲಿ, ತೆರಿಗೆ ಪಾವತಿದಾರರಿಗೆ ಈ ಯೋಜನೆಯು ಸಿಗುವುದಿಲ್ಲ ಎಂದು ಜನಸಾಮಾನ್ಯರು ಆರೋಪ ಮಾಡುತ್ತಿದ್ದು, ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳ ಮಧ್ಯೆ ಗೃಹಲಕ್ಷ್ಮೀ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net