ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ

Published on

ಕೆ.ಆರ್.ಪೇಟೆ: ತಾಲೂಕಿನ ಹಲವೆಡೆ ಅಭಿವೃದ್ಧಿ ಕಾಮಗಾರಿಗಳು ಮತ್ತು ಸರ್ಕಾರಿ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು.

ಪಟ್ಟಣದ ಕೆಶಿಪ್ ಬೈಪಾಸ್ ರಸ್ತೆ ನಿರ್ಮಿಸಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ 3.26 ಕೋಟಿ ರೂ. ವೆಚ್ಚದ ವಿದ್ಯಾರ್ಥಿ ನಿಲಯ, ಬೀರುವಳ್ಳಿಯಲ್ಲಿ 10 ಕೋಟಿ ರೂ. ವೆಚ್ಚದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ, 1.25 ಕೋಟಿ ರೂ. ವೆಚ್ಚದಲ್ಲಿ ಅಕ್ಕಿಹೆಬ್ಬಾಳಿನಲ್ಲಿ ಬಸ್ ನಿಲ್ದಾಣ, ನಿಲ್ದಾಣದಲ್ಲಿ 3 ವಾಣಿಜ್ಯ ಮಳಿಗೆಗಳು, ಉಪಾಹಾರ ಗೃಹ, ಸಂಚಾರ ನಿಯಂತ್ರಕರ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿ, 60 ಲಕ್ಷ ರೂ. ವೆಚ್ಚದಲ್ಲಿ ಅಕ್ಕಿಹೆಬ್ಬಾಳಿನಲ್ಲಿ ರೈತ ಸಂಪರ್ಕ ಕೇಂದ್ರ, 75 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಚ್ಚುವರಿ ಕೊಠಡಿ, ಪಟ್ಟಣದ ಜಯನಗರದಲ್ಲಿ 3.26 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯ, 1.75 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹೆಚ್ಚುವರಿ ಕೊಠಡಿ, ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಗ್ರಂಥಾಲಯ ಕಟ್ಟಡ-2, 2.40 ಕೋಟಿ ರೂ. ವೆಚ್ಚದಲ್ಲಿ ಉಪಾಹಾರ ಗೃಹ ಮತ್ತು ಹೆಚ್ಚುವರಿ ಶೈಕ್ಷಣಿಕ ಕಟ್ಟಡ ಉದ್ಘಾಟಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net