ಸಚಿವ ಮಧು ಬಂಗಾರಪ್ಪಗೆ ದಂಡ-ಶಿಕ್ಷೆ ವಿಧಿಸಿದ ಕೋರ್ಟ್

Madhu Bangarappa
Published on

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ನ್ಯಾಯಾಲಯ ದಂಡ ಮತ್ತು ಶಿಕ್ಷೆಯನ್ನು ವಿಧಿಸಿದೆ.


೬.೯೬ ಕೋಟಿ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ೬ ತಿಂಗಳು ಸೆರೆವಾಸ ಅನುಭವಿಸಲು ಆದೇಶಿಸಿದೆ.
೬ ಕೋಟಿ ೯೬ ಲಕ್ಷದ ೭೦ ಸಾವಿರ ರೂ. ದಂಡದ ಹಣದಲ್ಲಿ ೬,೯೬,೬೦,೦೦೦ ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ ೧೦ ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.


ಕೋರ್ಟ್‌ನಲ್ಲಿ ಕೇವಲ ೫೦ ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ ೩೦ರೊಳಗೆ ೬.೧೦ ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದರೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ನ್ಯಾ. ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.


ಏನಿದು ಪ್ರಕರಣ?
ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ ೬.೬೦ ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದರೆ, ೨೦೧೧ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ ೬.೬೦ಕೋಟಿ ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಆದರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net