ಜ.17ರೊಳಗೆ ಪುಸ್ತಕ ಪರಿಷ್ಕರಣೆ ವರದಿ ಸಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಸೂಚನೆ

minister madhu bangarappa
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
Published on

ಬೆಂಗಳೂರು ಪ್ರೊ. ಮಂಜುನಾಥ ಹೆಗಡೆ ನೇತೃತ್ವದಲ್ಲಿ ರಚಿಸಿರುವ ಶಾಲಾ ಪಠ್ಯಪರಿಷ್ಕರಣೆ ಸಮಿತಿಯು ಜ.17ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚೆವ ಮಧು ಬಂಗಾರಪ್ಪ ಅವರು ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರದಲ್ಲಿರುವ ಪಿಯು ಇಲಾಖೆ ಕಚೇರಿಯಲ್ಲಿ ಬುಧವಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ಸಿದ್ಧತೆಗಳು ಮತ್ತು ಪುಸ್ತಕ ಪರಿಷ್ಕರಣೆ ಕುರಿತು ಸುದೀರ್ಘವಾಗಿ ಚರ್ಚೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷಕ್ಕೆ ಪುಸ್ತಕಗಳ ಮುದ್ರಣಾ ಕಾರ್ಯ ಆರಂಭಿಸಬೇಕಿರುವ ಕಾರಣ ಆದಷ್ಟು ಬೇಗ ವರದಿ ನೀಡುವಂತೆ ತಿಳಿಸಿದರು.

ಇನ್ನ ಪರೀಕ್ಷಾ ಸಿದ್ಧತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈಗಾಗಲೇ ಎಸ್ಸೆಸ್ಸೆಲ್ಸಿ, ದ್ವಿತೀಯು ಪಿಯುಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ವಾರದಲ್ಲಿ ಅಂತಿಮ ವರದಿ ವೇಳಾಪಟ್ಟಿ ಪ್ರಕಟಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ಸಾರೆಂದು ತಿಳಿದು ಬಂದಿದೆ.

ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ, ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ. ಕಾವೇರಿ ಹಾಗೂ ಪಿಯು ಇಲಾಖೆ ನಿರ್ದೇಶಕಿ ಸಿಂಧು ಬಿ. ರೂಪೇಶ್ ಸೇರಿ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net