ಸಚಿವ ಮಧು ಬಂಗಾರಪ್ಪ ಭೇಟಿಯಾದ ಬಿಸಿಯೂಟ ಒಕ್ಕೂಟ

bisiyuta swamiji
Published on

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ವಿತರಣೆ ಮಾಡುತ್ತಿರುವ ಸಂಸ್ಥೆಗಳಿಗೆ ಸರ್ಕಾರವು ಸಹಕಾರ ನೀಡಬೇಕೆಂದು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಮಾಡಿತು.

ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಇಸ್ಕಾನ್, ಅದಮ್ಯಚೇತನ, ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ, ಸಮರ್ಥ ಗ್ರಾಮೀಣಾಭಿವೃದ್ಧಿ ಕೃಷಿ ಎನ್.ಕೆ. ಹುಬ್ಬಳ್ಳಿ ಸೇರಿ 66 ಸ್ವಯಂಸೇವಾ ಸಂಸ್ಥೆಗಳು ಅಕ್ಷರ ದಾಸೋಹವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿವೆ. ಈ ಸಂಸ್ಥೆಗಳು ಮತ್ತಷ್ಟು ಉತ್ತಮವಾಗಿ ಕಾರ್ಯ ನಿರ್ವಹಿಸಲು ಬೇಕಾದ ಸಹಕಾರವನ್ನು ನೀಡಲು ಸಚಿವರಿಗೆ ಮನದಟ್ಟು ಮಾಡಿಕೊಟ್ಟರು.

ಒಕ್ಕೂಟದ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು ಸಂಸ್ಥೆಗಳ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಬಿಸಿಯೂಟ, ಹಾಲು, ಶೇಂಗಾ ಚಿಕ್ಕಿ, ಬಾಳೇಹಣ್ಣು, ಮೊಟ್ಟೆಯನ್ನು ನೀಡುತ್ತಿದ್ದೀರಿ. ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನ ಮಾಡಿದರು.

ಈ ವೇಳೆ ಒಕ್ಕೂಟದ ಕಾರ್ಯದರ್ಶಿ ಕೆ. ಭೀಮಾ, ಖಜಾಂಚಿ ಕಲ್ಲಪ್ಪ ಬೋರಣ್ಣನವರ್, ನಿರ್ದೇಶಕ

ರವೀದ್ರಕುಮಾರ್, ಸದಸ್ಯರಾದ ಮಂಜುನಾಥ, ನಾಗೇಂದ್ರ, ಪ್ರವೀಣ್ ಸುಬ್ಬರಾಮಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net