ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ: ಕಾರಣ ಹೀಗಿದೆ | Doctorate

dk - 2025-06-03T131235.119
Published on

Doctorate : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಈ ಹಿಂದೆ ನೀಡಿದ್ದ  ಗೌರವ ಡಾಕ್ಟರೇಟ್ ಪದವಿಯನ್ನು ಲೋಕೋಪಯೋಗಿ ಸಚಿವ ನಿರಾಕರಿಸಿದ್ದಾರೆ.

ಈ ಕುರಿತು ವಿವಿ ಉಪ ಕುಲಪತಿಗೆ ಪತ್ರ ಬರೆದಿರುವ ಸಚಿವ ಸತೀಶ್​​ ಜಾರಕಿಹೊಳಿ, ''ತಮ್ಮ ಮೇಲೆ ಇನ್ನೂ ಸಾಕಷ್ಟು ಸಾಮಾಜಿಕ ಜವಾಬ್ದಾರಿ ಇದ್ದು, ಗುರುತರವಾದ ಹೊಣೆಗಾರಿಕೆಗಳನ್ನು ಜಾರಿ ಮಾಡಲು ಇನ್ನೂ ಹೆಚ್ಚಿನ ಕಾಲಾವಕಾಶ ಅಗತ್ಯ ಇದೆ'' ಎಂದಿದ್ದಾರೆ.

ಪತ್ರದಲ್ಲೇನಿದೆ..?

2025ರ ಮಾ.27ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ನಾನು ಆಭಾರಿಯಾಗಿದ್ದೇನೆ.

''ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದ್ದು, ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆ''.

ಈ ಹಿನ್ನಲೆಯಲ್ಲಿ, ತಾವು ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸದೇ, ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net