ಕೃಷಿ ಚಟುವಟಿಕೆಗೆ ವಿದ್ಯುತ್ ಕೊರತೆಯಾಗದಿರಲಿ

29..Pyp.01
Published on

ಪಿರಿಯಾಪಟ್ಟಣ : ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡಲು ಸೆಸ್ಕ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಸೂಚಿಸಿದರು.
ಪಟ್ಟಣದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋದ ಸಂದರ್ಭ ದೂರು ನೀಡಿ 15 ದಿನವಾದರೂ ರಿಪೇರಿ ಮಾಡದ ಕಾರಣ ರೈತರಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಸೆಸ್ಕ್ ಸಿಬ್ಬಂದಿ ಕಾರ್ಯನಿರ್ವಹಣೆ ಸಮರ್ಪಕವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ತಹಸೀಲ್ದಾರ್ ಕುಂಇ ಅಹಮದ್, ಸೆಸ್ಕ್ ನ ಕಾರ್ಯಪಾಲಕ ಇಂಜಿನಿಯರ್ ಪ್ರದೀಪ್, ಪ್ರಭಾರ ಎಇಇ ಸುನೀಲ್ ಯಾದವ್, ಪುರಸಭೆ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಶೋಕ್ ಕುಮಾರ್, ಪುರಸಭೆ ಸದಸ್ಯರಾದ ರವಿ, ಶ್ಯಾಮ್, ಮುಖಂಡರಾದ ಪಿ.ಮಹದೇವ್, ಶಿವರಾಜ್, ಚೌತಿ ಮಲ್ಲಣ್ಣ, ಹೇಮಂತ್, ಪಿ.ಪಿ.ಮಹದೇವ್, ರಾಮಚಂದ್ರ, ಗೋವಿಂದ್, ಆರ್.ಡಿ.ಮಹದೇವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net