ಹೆಣ್ಣು ಮಕ್ಕಳ ಬಗ್ಗೆ ಗೌರವ ಇದೆ; ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದ ಸಚಿವ ಸೋಮಣ್ಣ

V Somanna
Published on

ಚಾಮರಾಜನಗರ: ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿ, ಟೀಕೆಗೆ ಗುರಿಯಾಗಿರುವ ವಸತಿ ಸಚಿವ ವಿ.ಸೋಮಣ್ಣ ಇದೀಗ ಕ್ಷಮೆ ಯಾಚನೆ ಮಾಡಿದ್ದಾರೆ. 45 ವರ್ಷಗಳಿಂದ ಹಲವು ಏಳು ಬೀಳುಗಳನ್ನು ಕಂಡಿದ್ದೇನೆ. ಕಾರ್ಯಕ್ರಮದಲ್ಲಿ ಅಪಚಾರ ಮಾಡಿಲ್ಲ. ಪ್ರಾಯಶಃ ಯಾರಿಗಾದರು ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆಯ ಘಟನೆ ಘಟನೆಯೇ ಅಲ್ಲ. ಹೆಣ್ಣು ಮಗಳು ಪದೇ ಪದೇ ವೇದಿಕೆ ಮೇಲೆ ಬರುತ್ತಿದ್ದಳು. ತಾಯಿ ಎಷ್ಟು ಸಾರಿ ಬರುತ್ತೀಯ ಅಂತ ವಿಚಾರಿಸಿದೆ. ನಿನ್ನ ಸಮಸ್ಯೆ ಬಗೆ ಹರಿಸುತ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ ವಿನಃ, ಇನ್ನೇನು ಉದ್ದೇಶ ಇರಲಿಲ್ಲ ಎಂದು ಹೇಳಿದರು.

ನನಗೆ ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ, ಮಮಕಾರ ಇದೆ. ನಾನು ಕೂಡ ಬಡತನದಿಂದಲೇ ಬಂದವನು. ಆ ಹೆಣ್ಣು ಮಗಳಿಗೆ ಸಹ ಹಕ್ಕು ಪತ್ರ ಕೊಡಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net