ಭದ್ರೆಗೆ ಬಾಗೀನ ಅರ್ಪಿಸಿದ ಸಚಿವ ಎಸ್ಎಸ್ಎಂ

bagina arpane to bhadre
ಭದ್ರಾ ಜಲಾಶಯಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಬಸವಂತಪ್ಪ, ಶಿವಗಂಗಾ ಬಸವರಾಜು, ಶಾಂತನಗೌಡ, ಮಾಜಿ ಶಾಸಕ ರಾಮಪ್ಪ ಇತರರು ಬಾಗಿನ ಸಲ್ಲಿಸಿದರು.
Published on

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಉತ್ತಮ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ಭದ್ರಾ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದ ಪರಿಣಾಮ ರೈತರಲ್ಲಿ ಆತಂಕದ ಛಾಯೆ ಉಂಟಾಗಿತ್ತು. ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದ ಕೃಷಿ, ಹಾಗೂ ತೋಟಗಾರಿಕೆ ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ ಎಂದು ಹೇಳಿದರು.
ಜಲಾಶಯದ ವ್ಯಾಪ್ತಿಗೊಳಪಡುವ ಅಚ್ಚುಕಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಜತೆಗೆ ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆ ನಡೆಸಬೇಕೆಂದು ಮನವಿ ಮಾಡಿದರು.
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ, ಹರಿಹರದ ಮಾಜಿ ಶಾಸಕ ರಾಮಪ್ಪ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net