ಮೂರು ಅಲೆಗಳಲ್ಲಿ ಸೋಂಕಿನಿಂದ ಪಾರಾಗಿದ್ದ ಸಚಿವ ಸುಧಾಕರ್'​ಗೆ ಕರೊನಾ ಪಾಸಿಟಿವ್

sudhakar
Published on

ಬೆಂಗಳೂರು: ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ವಿಷಯವನ್ನು ಸ್ವತ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net