ವಿಮ್ಸ್ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸಚಿವ ಜಮೀರ್ ಸೂಚನೆ

ZAMEER AHMED KHAN
Published on

ಬೆಂಗಳೂರು : ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೂಡ್ಲಿಗಿ ತಾಲೂಕು ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net