ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

Harassment
Published on

ಭೋಪಾಲ್​: ಆಘಾತಕಾರಿ ಘಟನೆ ಒಂದರಲ್ಲಿ ಅಪ್ರಾಪ್ತ ವಯಸಿನ ಬಾಲಕಿ ಒಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಘಟನೆಯೂ ಸತ್ನಾ ಜಿಲ್ಲೆಯ ಚಿತ್ರಕೂಟದಲ್ಲಿ ನಡೆದಿದ್ದು ಬಾಲಕಿಯ ಮೇಲೆ ಆರು ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ದೋಣಿಯಲ್ಲಿ ಕೃತ್ಯ

ಸಂತ್ರಸ್ತ ಬಾಲಕಿ ಆಕೆಯ ಅಪ್ರಾಪ್ತ ವಯಸಿನ ಬಾಯ್​ಫ್ರೆಂಡ್​ನೊಂದಿಗೆ ಮಂದಾಕಿನಿ ನದಿ ದಡದಲ್ಲಿರುವ ಭಾರತ್​ ಘಾಟ್​ಗೆ ತೆರಳಿದ್ದಾಳೆ. ಈ ವೇಳೆ ಬಾಲಕಿ ಒಬ್ಬಂಟಿಯಾಗಿದ್ದನ್ನು ಗಮನಿಸಿದ ದೋಣಿಗಾರರು ಸಂತ್ರಸ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

harassment

ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು ಸಂತ್ರಸ್ತೆ ಆಕೆಯ ಸ್ನೇಹಿತನೊಂದಿಗೆ ಶನಿವಾರ ಬೆಳಗ್ಗೆ ಚಿತ್ರಕೂಟಕ್ಕೆ ತೆರಳಿ ನಡೆದ ಘಟನೆ ಬಗ್ಗೆ ಪೊಲೀಸರಿಗೆ ವಿವರಿಸಿದ್ದಾಳೆ.

ಆರೋಪಿಗಳು ಅಂದರ್​

ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಪಡೆದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಘಟನೆ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಗೆ ಕಠಿಣ ಕಾನೂನು ಕ್ರಮದಡಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net