ವಿವಿಧ ಕಾಮಗಾರಿಗಳ ಭೂಮಿಪೂಜೆ ಜ. 5ರಂದು

je721538035802367-abc
Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೆಯುಐಡಿಎಫ್​ಸಿ, ನಗರಸಭೆ ಸಹಯೋಗದಲ್ಲಿ 49.19 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ 1.02 ಕೋಟಿ ರೂ. ಮೊತ್ತ ಕಾಮಗಾರಿ ಉದ್ಘಾಟನೆ ಜ. 5ರಂದು ಬೆಳಗ್ಗೆ 11 ಗಂಟೆಗೆ ನಗರದ ಗುರುಭವನದಲ್ಲಿ ಜರುಗಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಕಾಮಗಾರಿಗಳಿಗೆ ಚಾಲನೆ ನೀಡುವರು. ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಪೌರಾಡಳಿತ ಮತ್ತು ಹಜ್​ ಖಾತೆ ಸಚಿವ ರಹೀಂಖಾನ್​, ಸಂಸದ ಬಸವರಾಜ ಬೊಮ್ಮಾಯಿ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net