VIDEO| ಕಾರಿನ ಛಾವಣಿ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದ ಪುಂಡರು

Viral Video
Published on

ಗುರುಗ್ರಾಮ: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಶುಭ ಸಂದರ್ಭದಲ್ಲೂ ಸಹ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುವ ಗೀಳಿಗೆ ಬಿದ್ದು, ಹುಚ್ಚಾಟವಾಡಿರುವುದು ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ಕಾರಿನ ಛಾವಣಿ ಮೇಲೆ ಪಟಾಕಿ ಸಿಡಿಸುತ್ತಾ ಹೆದ್ದಾರಿಯಲ್ಲಿ ಹುಚ್ಚಾಟವಾಡಿರುವುದು ಕಂಡು ಬಂದಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಿಡಿಕಾರಿರುವ ನೆಟ್ಟಿಗರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನ ಮೇಲೆ ಪಟಾಕಿಗಳನ್ನು ಇಟ್ಟು ಗುರುಗ್ರಾಮ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿರುವುದನ್ನು ನೋಡಬಹುದಾಗಿದೆ. ಮತ್ತೊಂದೆಡೆ ಇವರ ಹುಚ್ಚಾಟವನ್ನು ಮತ್ತೊಂದು ಬದಿಯಲ್ಲಿ ಇನ್ನಿಬ್ಬರು ವಿಡಿಯೋ ಮಾಡುತ್ತಿರುವುದನ್ನು ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಈ ರೀತಿಯ ಕರತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net