ಶಿವಮೊಗ್ಗದಲ್ಲಿ ಹಣಕ್ಕಾಗಿ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು: 20 ಲಕ್ಷ ರೂ.ಗೆ ಬೇಡಿಕೆ

Kidnap Girl
Published on

ಶಿವಮೊಗ್ಗ: ಹಣಕ್ಕಾಗಿ ಯುವತಿಯನ್ನು ಅಪಹರಿಸಿರುವ ಆತಂಕಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ದೂರು ದಾಖಲಾಗಿದೆ.

ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ರಂಜಿತ, ಅಪಹರಣಕ್ಕೀಡಾದ ಯುವತಿ. ಈಕೆ ಶಿವಮೊಗ್ಗದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಳು. ರಂಜಿತಳ ದೂರವಾಣಿ ಸಂಖ್ಯೆಯಿಂದಲೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ದುಷ್ಕರ್ಮಿಗಳು ಕರೆ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು..

ಯುವತಿಯ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಮುಂದೆ ಆಗುವ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ.

ಈ ಸಂಬಂಧ ಯುವತಿಯ ಪಾಲಕರು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಹರಣ ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳ ಹಡೆಮುರಿ ಕಟ್ಟಲು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net